ಮೊಳಕಾಲ್ಮುರು: ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಪ್ರಯುಕ್ತವಾಗಿ ಪಟ್ಟಣದಲ್ಲಿ ಬಿಜೆಪಿ ಮಂಡಲದಿಂದ ವಿವಿಧ ಸೇವಾ ಕಾರ್ಯಕ್ರಮಗಳು
ಮೊಳಕಾಲ್ಮುರು:-ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತವಾಗಿ ಬಿಜೆಪಿ ಮಂಡಲದಿಂದ ಮೊಣಕಾಲ್ಮುರು ಪಟ್ಟಣದಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ನರೇಂದ್ರ ಮೋದಿ ಹುಟ್ಟು ಹಬ್ಬದ ಪ್ರಯುಕ್ತ 75ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತವಾಗಿ ಮಾರ್ಕಂಡಯ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು ನಂತರ ಬೆಳಗ್ಗೆ 11:30 ಕ್ಕೆ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಾಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ನಿಕಟ ಪೂರ್ವ ಬಿಜೆಪಿ ಮಂಡಲ ಅಧ್ಯಕ್ಷರಾದ ಡಾಕ್ಟರ್ ಪಿ ಎಂ ಮಂಜುನಾಥ್ ಮಾತನಾಡಿ, ನರೇಂದ್ರ ಮೋದಿಯವರು 11 ವರ್ಷಗಳ ಕಾಲ ಆಡಳಿತ ನಡೆಸುತ್ತಾ ಬಂದಿದ್ದಾರೆ ಎಂದರು.