ಶಿವಮೊಗ್ಗ: ಈಶ್ವರಪ್ಪ ಹುಟ್ಟುಹಬ್ಬದ ಅಂಗವಾಗಿ ಎರಡು ದಿನ ವಿಶೇಷ ಕಾರ್ಯಕ್ರಮ: ನಗರದಲ್ಲಿ ಶ್ರೀಗಂಧ ಸಂಸ್ಥೆ ಮುಖಂಡ ರಾಮಚಂದ್ರ
ಹಿರಿಯ ರಾಜಕಾರಣಿ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರ 77ನೇ ವರ್ಷದ ಹುಟ್ಟು ಹಬ್ಬವನ್ನು ನಗರದ ಶ್ರೀಗಂಧ ಸಂಸ್ಥೆ ವತಿಯಿಂದ ಜೂನ್ 10 ಮತ್ತು 11ರಂದು ಎರಡು ದಿನಗಳ ಕಾಲ ಹೋಮ, ಹವನ, ಯಾಗಗಳ ಜೊತೆಗೆ ಧಾರ್ಮಿಕ ಸಭೆ ಮತ್ತು ಪ್ರತಿಭಾಪುರಸ್ಕಾರಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂ ಶ್ರೀಗಂಧ ಸಂಸ್ಥೆ ಮುಖಂಡ ರಾಮಚಂದ್ರ ತಿಳಿಸಿದರು. ಶುಕ್ರವಾರ ಸಂಜೆ 5 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿರಿಯರಾದ ಕೆ.ಎಸ್. ಈಶ್ವರಪ್ಪನವರು ಕೇವಲ ರಾಜಕಾರಣವಲ್ಲದೆ, ಧಾರ್ಮಿಕ, ಸಾಂಸ್ಕೃತಿಕ, ಸಾಹಿತ್ಯ ಕ್ಷೇತ್ರವೂ ಸೇರಿ ಎಲ್ಲಾ ರಂಗಗಳಲ್ಲೂ ತಮ್ಮದೆ ಕೊಡುಗೆ ನೀಡಿದ್ದಾರೆ.