ಇಳಕಲ್: ಕಾಂಗ್ರೆಸ್ ಕಾರ್ಯಾಲಯದಲ್ಲಿ ಚನ್ನಮ್ಮ ಜಯಂತಿ ಆಚರಣೆ : ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಗಿ
Ilkal, Bagalkot | Oct 23, 2025 ಬಾಗಲಕೋಟ ಜಿಲ್ಲೆಯ ಇಳಕಲ್ ನಗರದ ಕಾಂಗ್ರೆಸ್ ಕಾರ್ಯಲಯದಲ್ಲಿ ವೀರರಾಣಿ ಕಿತ್ತೂರು ರಾಣಿ ಚನ್ನಮ್ಮನ ಜಯಂತಿಯನ್ನು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಅ.೨೩ ಗುರುವಾರ ಮಧ್ಯಾಹ್ನ ೧ ಗಂಟೆಗೆ ಆಚರಿಸಲಾಯಿತು. ರಾಣಿ ಚನ್ನಮ್ಮಳ ಭಾವಚಿತ್ರಕ್ಕೆ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ವೀಣಾ ಕಾಶಪ್ಪನವರ ಪುಷ್ಪಾರ್ಚನೆ ಮಾಡಿ ಮಾತನಾಡಿ ಸ್ವಾತಂತ್ರ‍್ಯ ಹೋರಾಟದ ಸಂದರ್ಭದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಅವರು ತೋರಿದಂತಹ ಧೈರ್ಯ, ಸಾಹಸ ನಾಡಿನ ಪ್ರತಿಯೊಬ್ಬ ಮಹಿಳೆಗೂ ಆದರ್ಶವಾದದ್ದು ಎಂದು ಹೇಳಿದರು. ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ್,ಇಳಕಲ್ಲ ತಾಲೂಕಾ ಪಂಚಮಸಾಲಿ ಸಮಾಜದ ಅಧ್ಯಕ್ಷ ಮಹಾಂತಗೌಡ ಪಾಟೀಲ ಜಿಎಂಇ, ನಗರಸಭೆ ಸದಸ್ಯ ಅಮೃತ ಬಿಜ್ಜಳ, ಮುಖಂಡರಾದ ಅಹ್ಮದಸಾಬ ಬಾಗವಾನ, ಬಸವರಾಜ ನಾಲವಾಡದ, ಡಾ.ಟಿಪ್ಪು ಭಂಡಾರಿ