ಹೊಳಲ್ಕೆರೆ: ಪಟ್ಟಣದ ಪ್ರವಾಸಿ ಮಂದರದಲ್ಲಿ ಕಾಡುಗೊಲ್ಲ ಸಮಾಜದ ವತಿಯಿಂದ ಸಭೆ
ಹೊಳಲ್ಕೆರೆ ಪಟ್ಟಣದ ಪ್ರವಾಸಿ ಮಂದರದಲ್ಲಿ ಕಾಡುಗೊಲ್ಲ ಸಮಾಜದ ವತಿಯಿಂದ ಸಭೆ ಹಮ್ಮಿಕೊಳ್ಳಲಾಗಿತ್ತು. ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ಹಮ್ಮಿಕೊಂಡಿದ್ದು ಮಾಜಿ ಶಾಸಕ ಎ.ವಿ ಉಮಾಪತಿ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದು ಸೆಪ್ಟೆಂಬರ್ 22 ರಿಂದ ಸರ್ಕಾರ ಕೈಗೊಂಡಿರುವ ಸಮೀಕ್ಷೆಯಲ್ಲಿ ಪ್ರತಿಯೊಬ್ಬರು ಪಾಲ್ಗೊಂಡು ಜಾತಿ ಕಾಲಂ ನಲ್ಲಿ ಕಾಡುಗೊಲ್ಲ ಎಂದು ನಮೂದಿಸಬೇಕು ಎಂದು ತಿಳಿಸಿದರು