ಚಿತ್ರದುರ್ಗ: ಸರ್ಕಾರಿ ನೌಕರರ ಮೇಲಿನ ದೌರ್ಜನ್ಯ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ
ಸರ್ಕಾರಿ ನೌಕರರ ಮೇಲಿನ ಹಲ್ಲೆ ಮತ್ತು ದೌರ್ಜನ್ಯ ಖಂಡಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ವತಿಯಿಂದ ಶುಕ್ರವಾರ ಮೌನ ಪ್ರತಿಭಟನೆ ನಡೆಸಲಾಯಿತು. ನಗರದ ಪ್ರವಾಸಿ ಮಂದಿರದಿಂದ ಮೌನ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸರ್ಕಾರಿ ನೌಕರರು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಭಯಮುಕ್ತ ವಾತಾವರಣದಲ್ಲಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡಬೇಕು, ವಿನಾಕಾರಣ ಕಿರುಕುಳ ನೀಡುವ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಾಲತೇಶ ಮುದಜ್ಜಿ ಅವರು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ಸರ್ಕಾರಿ ನೌಕರರು ಈಗಲೇ ಒತ್ತಡದ ನಡುವೆ ಕೆಲಸ ಮಾಡುತ್ತಿದ್ದಾರೆ ಎಂದರು