ಹೊಳಲ್ಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಜನಜಾಗೃತಿ ಸಭೆ
ಹೊಳಲ್ಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಜನಜಾಗೃತಿ ಸಭೆ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ಪ್ರದೇಶ ಕುರುಬರ ತಾಲೂಕು ಸಂಘ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಜನಜಾಗೃತಿ ಕುರಿತು ಶುಕ್ರವಾರ ಕರೆದಿದ್ದ ಪೂರ್ವಭಾವಿ ಸಭೆ ಹಮ್ಮಿಕೊಂಡಿದ್ದು ಚಿತ್ರದುರ್ಗ ಪ್ರದೇಶ ಕುರುಬ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಟಿ. ಜಗದೀಶ್ ಅವರು ಮಾತನಾಡಿದ್ದು ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ ,ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯಲ್ಲಿ ಹಿಂದೂ ಕುರುಬ ಎಂದು ಜಾತಿ ಕಲಂ ನಲ್ಲಿ ನಮೂದಿಸಲು ಸಮೀಕ್ಷೆ ಬಂದವರಿಗೆ ಮಾಹಿತಿ ನೀಡಬೇಕೆಂದು ಮನವಿ ಮಾಡಿದ್ದಾರೆ.