ಅಳ್ನಾವರ: ಪಟ್ಟಣದ ಬಸ್ ನಿಲ್ದಾಣದಲ್ಲಿ ತಾಲ್ಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯಿಂದ ಬಸ್ ಪೂಜೆ
ಅಳ್ನಾವರ ತಾಲೂಕು ಪಂಚ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯಿಂದ ಬಸ್ ನಿಲ್ದಾಣದಲ್ಲಿ ಸೋಮವಾರ ಶಕ್ತಿ ಯೋಜನೆಯ ಪೂಜಾ ಕಾರ್ಯಕ್ರಮ ನಡೆಸಲಾಯಿತು. ಮಹಿಳಾ ಪ್ರಯಾಣಿಕರು ಕೇಕ್ ಕತ್ತರಿಸಿ ಹಾಗೂ ಸಿಹಿ ಹಂಚಿ ಸಂಭ್ರಮಿಸಿದರು. ಪಂಚ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ವಿನಾಯಕ ಕುರುಬರ, ಸಚಿವ ಸಂತೋಷ ಲಾಡ್ ಅವರ ಆಪ್ತ ಕಾಯದರ್ಶಿ ಶ್ರೀಕಾಂತ ಗಾಯಕವಾಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಗೌಡ ಕರೀಗೌಡರ ಮತ್ತು ಪಟ್ಟಣ ಪಂಚಾಯತ ಸದಸ್ಯರು. ಗ್ಯಾರೆಂಟಿ ಯೋಜನೆ ಸಮಿತಿ ಸದಸ್ಯರ ಸೇರಿದಂತೆ ಇತರರಿದ್ದರು.