ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಕ್ಷೆಗಳನ್ನು ಉಲ್ಲಂಘಿಸಿ ಕಟ್ಟಡಗಳು ಮತ್ತು ಅನಧಿಕೃತ ಕಟ್ಟಡ ನಿರ್ಮಾಣಗಳನ್ನು ತಡೆಯುವ ಸಂಬಂಧ ಕಾರ್ಯವಿಧಾನದ ಅರಿವಿಗಾಗಿ ಪಾಲಿಕೆಯ ಅಧಿಕಾರಿಗಳಿಗೆ ಕಾರ್ಯಾಗಾರವನ್ನು ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಪಾಲಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ನಕ್ಷೆ ಮಂಜೂರಾತಿ ಉಲ್ಲಂಘಿಸಿ ಅಥವಾ ಅನಧಿಕೃತವಾಗಿ ನಕ್ಷೆ ಮಂಜೂರಾತಿ ಪಡೆಯದೇ ನಿರ್ಮಿಸುತ್ತಿರುವ ಕಟ್ಟಡಗಳನ್ನು ತೆರವುಗೊಳಿಸಲು ಅಧಿಕಾರ ಪ್ರತ್ಯಯೋಜನೆ ನೀಡಲಾಗಿದೆ.