ಬೆಂಗಳೂರು ಉತ್ತರ: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ: ನೀರಾವರಿ ಭೂಮಿಗೆ 40 ಲಕ್ಷ ರೂ. ಪರಿಹಾರ ನೀಡಲು ಸಚಿವ ಸಂಪುಟ ನಿರ್ಧಾರ
ಕೃಷ್ಣಾ ಮೇಲ್ದಂಡೆ ಯೋಜನೆಯ(ಯುಕೆಪಿ) ಮೂರನೇ ಹಂತದ ಭೂ ಸ್ವಾಧೀನಕ್ಕೆ ರಾಜ್ಯ ಸರ್ಕಾರ ಮಂಗಳವಾರ ಪರಿಹಾರ ನಿಗದಿ ಮಾಡಿದ್ದು, ನೀರಾವರಿ ಭೂಮಿಗೆ ಎಕರೆಗೆ 40 ಲಕ್ಷ ರೂ. ಮತ್ತು ಒಣ ಭೂಮಿಗೆ ಎಕರೆಗೆ 30 ಲಕ್ಷ ರೂ. ಪರಿಹಾರವನ್ನು ನೀಡಲು ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಯುಕೆಪಿ ಮೂರನೇ ಹಂತವು ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 519 ರಿಂದ 524 ಮೀಟರ್‌ಗೆ ಹೆಚ್ಚಿಸುವುದನ್ನು ಒಳಗೊಂಡಿರುತ್ತದೆ. ಇದು ಶೇಖರಣಾ ಸಾಮರ್ಥ್ಯವನ್ನು 100 ಟಿಎಂಸಿ ಅಡಿ ಹೆಚ್ಚಿಸುತ್ತದೆ. ಇದಕ್ಕೆ 1.33 ಲಕ್ಷ ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳುವ ಅಗತ್ಯವಿದೆ. ಇದರಲ್ಲಿ ಮುಳುಗಡೆಯಾಗುವ 75,563 ಎಕರೆ ಭೂಮಿ ಸಹ ಸೇರಿದೆ.