ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಅವರು ತಿಳಿಸಿದರು ಗುರುವಾರ ಸಂಜೆ 5 ಗಂಟೆ ಸುಮಾರಿಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಸುದ್ದಿಗಳ ಬೆನ್ನಲ್ಲೆ ಸಿಎಂ ಆಪ್ತ ಸಚಿವ ಜಮೀರ್ ಅಹಮದ್ ಖಾನ್ ಹೇಳಿಕೆ ಪ್ರಮುಖ ಪಡೆದಿದೆ. ಸಿಎಂ ಕುರ್ಚಿ ಖಾಲಿಯಿಲ್ಲ 2028 ರವರೆಗೂ ಸಿದ್ದರಾಮಯ್ಯ ಅವರೇ ಸಿಎಂ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ನಮ್ಮದು ಹೈಕಮಾಂಡ್ ಪಕ್ಷ ಹೈಕಮಾಂಡ್ ತಿರ್ಮಾನಕ್ಕೆ ಬದ್ದ ಎಂದರು.