ಹಾಸನ: ಹಾಸನದಲ್ಲಿ ಹೆಚ್ಚುತ್ತಿರುವ ಅಪರಾಧ: ಎಎಪಿ ವತಿಯಿಂದ ವಿನೂತನ ಪ್ರತಿಭಟನೆಗೆ ಕರೆ
Hassan, Hassan | Sep 11, 2026 ಹಾಸನದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷ ಪ್ರತಿಭಟನೆಗೆ ಸಜ್ಜಾಗಿದೆ. ಪೊಲೀಸ್ ವರಿಷ್ಠಾಧಿಕಾರಿಯ ವರ್ಗಾವಣೆಗೆ ಆಗ್ರಹಿಸಿ ಶುಕ್ರವಾರ ಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಎಪಿ ರಾಜ್ಯ ಉಪಾಧ್ಯಕ್ಷ ಅಗಿಲೆ ಯೋಗೀಶ್ ತಿಳಿಸಿದ್ದಾರೆ.