ಹೃದಯ ವಿದ್ರಾವಕ: ಪಾವಂಜೆಯಲ್ಲಿ ತಮ್ಮನ ಅಂತ್ಯ ಸಂಸ್ಕಾರಕ್ಕೆಂದು ಬಂದಿದ್ದ ಅಕ್ಕ ಅಪಘಾತದಲ್ಲಿ ಸಾವು
ತಮ್ಮನ ಅಂತ್ಯ ಸಂಸ್ಕಾರಕ್ಕೆಂದು ಚೆನ್ನೈನಿಂದ ಬಂದಿದ್ದ ಅಕ್ಕ ನಗರದ ಹೊರವಲಯದ ಪಾವಂಜೆ ಬಳಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಿಸದೆ, ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ನಗರದ ಬಂಗ್ರಕೂಳೂರು ನಿವಾಸಿ ಶ್ರುತಿ (27) ಮೃತಪಟ್ಟವರು. ಕಂಪ್ಯೂಟರ್ ಇಂಜಿನಿಯರಿಂಗ್ ಮುಗಿಸಿರುವ ಶ್ರುತಿ ಚೆನ್ನೈನಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದರು. ಮೆಕ್ಯಾನಿಕ್ ಆಗಿದ್ದ ತನ್ನ ಸಹೋದರ ಸುಜಿತ್ ಜೂನ್ 10ರಂದು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅವರು ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲು ಕೆಲಸಕ್ಕೆ ರಜೆ ಹಾಕಿ ಮನೆಗೆ ಬಂದಿದ್ದರು.