ಜಗಳೂರು: ಚಿಕ್ಕಮ್ಮನಹಟ್ಟಿ ಗ್ರಾಮದಲ್ಲಿ ಕೆರೆ ನಿರ್ಮಾಣ ಅಭಿವೃದ್ಧಿ ಕಾಮಗಾರಿ, ಶಾಸಕ ದೇವೇಂದ್ರಪ್ಪ ಚಾಲನೆ
ಚಿಕ್ಕಮ್ಮನಹಟ್ಟಿ ಗ್ರಾಮದಲ್ಲಿ ಕೆರೆ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾದ ₹3.5 ಕೋಟಿಯಲ್ಲಿ ಮೊದಲನೆ ಕಂತಿನ ₹1.5 ಕೋಟಿ ಬಿಡುಗಡೆಯಾಗಿದ್ದು ಗುದ್ದಲಿ ಪೂಜಾ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ಶಾಸಕ ಬಿ.ದೇವೇಂದ್ರಪ್ಪ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಗ್ರಾಮದ ಹಿರಿಯ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.