ಶಿರಸಿ: ದುಶ್ಚಟಗಳಿಂದ ದೂರವಾಗಿ ಸಮಾಜಕ್ಕೆ ಉಡುಗೊರೆ ನೀಡಿ: ನಗರದ ರಂಗಧಾಮದಲ್ಲಿ ಸಹಾಯಕ ಆಯುಕ್ತೆ ಕಾವ್ಯರಾಣಿ
ಶಿರಸಿ : ದುಶ್ಚಟಗಳಿಂದ ದೂರವಾಗಿ ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡು ಪ್ರತಿಯೊಬ್ಬರು ಸಮಾಜಕ್ಕೆ ಹಾಗೂ ಕುಟುಂಬಕ್ಕೆ ಉಡುಗೊರೆ ನೀಡಬೇಕು ಎಂದು ಸಹಾಯಕ ಆಯುಕ್ತೆ ಕೆ.ವಿ.ಕಾವ್ಯಾರಾಣಿ ಹೇಳಿದರು. ನಗರದ ರಂಗಧಾಮದಲ್ಲಿ ಉತ್ತರಕನ್ನಡ ಜಿಲ್ಲಾ ಪೊಲೀಸ್ ಶಿರಸಿ ಉಪವಿಭಾಗದ ವತಿಯಿಂದ ಹಮ್ಮಿಕೊಂಡ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಗುರವಾರ ಉದ್ಘಾಟಿಸಿ ಮಾತನಾಡಿದ ಅವರು, ಒಳ್ಳೆಯ ಹವ್ಯಾಸ ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಗುರುತಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.