ರಾಯಚೂರು: ಪಂಚಮುಖಿ ಆಂಜನೇಯ ದೇವಸ್ಥಾನ ಆಡಳಿತ ಮಂಡಳಿ ವಿರುದ್ಧ ಭಕ್ತರ ಅಸಮಾಧಾನ
ರಾಯಚೂರು ತಾಲೂಕಿನ ಗಾಣದಾಳ ಗ್ರಾಮದ ಬಳಿ ಇರುವ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಆದಾಯ ಭಕ್ತರಿಂದ ಬರುತ್ತಿದೆ. ಆದರೆ ಭಕ್ತರ ಹಿತ ಕಾಪಾಡುವಲ್ಲಿ ಆಡಳಿತ ಮಂಡಳಿ ವಿಫಲವಾಗಿದೆ ಎಂದು ಭಕ್ತರು ಅಸಮಾಧಾನ ಹೊರಹಾಕಿದ್ದಾರೆ. ಪ್ರತಿನಿತ್ಯ ಸಾವಿರಾರು ಭಕ್ತರು ವಾಹನಗಳಲ್ಲಿ ದೇವಸ್ಥಾನಕ್ಕೆ ಆಗಮಿಸುತ್ತಾರೆ. ಸಾಕಷ್ಟು ಟ್ರಾಫಿಕ್ ಜಾಮ್ ಉಂಟಾಗುತ್ತದೆ. ಸರಿಯಾದ ವ್ಯವಸ್ಥೆ ಮಾಡಲು ದೇವಸ್ಥಾನದಿಂದ ಸಿಬ್ಬಂದಿಗಳನ್ನೂ ಇಡದೆ, ಭಕ್ತರಿಗೆ ಅನಾನುಕೂಲವಾದರೂ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.