ಬೆಂಗಳೂರು ಯಲಹಂಕದ ಕೋಗಿಲು ಬಡಾವಣೆ ಅಕ್ರಮ ನಿರ್ಮಾಣ ತೆರವು ಸಂಬಂಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಿಎಂ ನಿವಾಸ ಕಾವೇರಿಯಲ್ಲಿ ಸೋಮವಾರ ಸಂಜೆ 6:30 ರ ಸುಮಾರಿಗೆ ಸಭೆ ನಡೆಸಿದರು. ಈ ವೇಳೆ ಅನೇಕರು ತಮಗೆ ಬೇರೆ ಕಡೆ ಮನೆಗಳಿದ್ದರೂ ಇಲ್ಲಿ ಗುಡಿಸಲು ಹಾಕಿಕೊಂಡಿದ್ದರು. ಉದ್ಯೋಗ ಅರಸಿ ಬಂದು ಇಲ್ಲಿ ವಾಸವಾಗಿದ್ದಾರೆ. ಯಾರಿಗೆ ನಿಜವಾಗಿಯೂ ವಾಸಕ್ಕೆ ಮನೆ ಇಲ್ಲವೊ ಅವರಿಗೆ ಮುಖ್ಯಮಂತ್ರಿಗಳ 1 ಲಕ್ಷ ವಸತಿ ಯೋಜನೆಯಲ್ಲಿ ಮನೆ ನೀಡಲಾಗುವುದು. ಇದಕ್ಕೆ ಅವರು ಒಂದೂವರೆಯಿಂದ ಎರಡು ಲಕ್ಷ ಹಣ ಪಾವತಿಸಬೇಕು. ಇದಕ್ಕೆ ಸಾಲ ಸೌಲಭ್ಯ ಕಲ್ಪಿಸುವ ಜವಾಬ್ದಾರಿಯನ್ನು ವಸತಿ ಸಚಿವ ಜಮೀರ್ ಅಹ್ಮದ್ ಅವರಿಗೆ ವಹಿಸಲಾಗಿದೆ ಎಂದು ಚರ್ಚಿಸಿಲಾಗಿದೆ.