ಯಲ್ಲಾಪುರ: ತಾಲೂಕು ಪಂಚಾಯಿತಿ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಪ್ರಥಮದರ್ಜೆ ಕಾಲೆಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಿ ಮಾತನಾಡಿ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಯ ಅಗತ್ಯತೆಯನ್ನು ಒತ್ತಿ ಹೇಳಿ, ವಿದ್ಯಾರ್ಥಿಗಳು ಹಾಗೂ ಯುವಕರು ಈ ಮೇಳದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಶಿಕ್ಷಣ ಸಂಸ್ಥೆಗಳಿಗೆ ಮತ್ತು ಸಮಾಜಕ್ಕೆ ಋಣಿಯಾಗಿರಬೇಕುಎಂದರು. ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾ ಅಧಿಕಾರಿ ಜಿ. ಸತೀಶ್ ಮಾತನಾಡಿ ಯುವಕ ಮತ್ತು ಯುವತಿಯರ ಉದ್ಯೋಗಾರ್ಹತೆಯನ್ನು ಹೆಚ್ಚಿಸಿ ಸ್ವಾವಲಂಬನೆಯತ್ತ ಮುನ್ನಡೆಯಲು ಈ ಮೇಳವು ಮಹತ್ವದ ಹೆಜ್ಜೆಯಾಗಿದೆ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ. ಆರ್.ಡಿ. ಜನಾರ್ಧನ್ ಅವರು ಮಾತನಾಡಿದರು