ಬಳ್ಳಾರಿ: ಕೊಳಗಲ್ಲು ಗ್ರಾಮದಲ್ಲಿ ವೈದ್ಯಕೀಯ ಪದವಿ ಇಲ್ಲದೇ ವೈದ್ಯ ವೃತ್ತಿ ಮಾಡುತ್ತಿದ್ದ ಇಬ್ಬರು ನಕಲಿ ವೈದ್ಯರ ಕ್ಲಿನಿಕ್ ಸೀಜ್
ಯಾವುದೇ ವೈದ್ಯಕೀಯ ಪದವಿ ಪಡೆಯದೇ ಔಷಧಿಗಳ ಮಾಹಿತಿ ಪಡೆದುಕೊಂಡು ಜನತೆಗೆ ತಾವು ವೈದ್ಯರೆಂದು ಸುಳ್ಳು ಹೇಳಿ ವೈದ್ಯ ವೃತ್ತಿ ಮಾಡುತ್ತಿದ್ದ ಇಬ್ಬರು ನಕಲಿ ವೈದ್ಯರ ಕ್ಲಿನಿಕ್ಗಳನ್ನು ಕೊಳಗಲ್ಲು ಗ್ರಾಮದಲ್ಲಿ ಸೀಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಹೇಳಿದ್ದಾರೆ. ತಾವು ವೈದ್ಯರೆಂದು ಬಿಂಬಿಸಿ ಯಾವುದೇ ವೈದ್ಯಕೀಯ ಪದವಿ ಪಡೆಯದೇ ಕೇವಲ ಪಿ.ಯು.ಸಿ ತನಕ ಓದಿಕೊಂಡು ಔಷಧಿಗಳ ಬಗ್ಗೆ ಮಾಹಿತಿ ಪಡೆದುಕೊಂಡು ಜನತೆಗೆ ಚಿಕಿತ್ಸೆ ನೀಡುತ್ತಿದ್ದ ಮಹೇಶ್ ಕ್ಲಿನಿಕ್, ಮೆಹಬೂಬ್ ಭಾಷ ಕ್ಲಿನಿಕ್ಗಳನ್ನು ಸೀಜ್ ಮಾಡಿ ಜಿಲ್ಲಾಧಿಕಾರಿಗಳ ಮುಂದಿನ ಕ್ರಮಕ್ಕಾಗಿ ವರದಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.