ಧಾರವಾಡ: ಮಾಜಿ ಪಿಎಂ ಇಂದಿರಾಗಾಂಧಿ ಆಡಳಿತದ ಅರಾಜಕತೆ, ಇತಿಹಾಸ ತಿಳಿಯುವ ಅವಶ್ಯಕತೆ ಇದೆ: ನಗರದಲ್ಲಿ ಕೇಂದ್ರ ಸಚಿವ ಜೋಶಿ
ಮಾಜಿ ಪ್ರಧಾನ ಮಂತ್ರಿ ಇಂದಿರಾಗಾಂಧಿ ಅವರ ಆಡಳಿತದ ಅರಾಜಕತೆಯ ಇತಿಹಾಸ ತಿಳಿಯುವ ಅವಶ್ಯಕತೆ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ಧಾರವಾಡ ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಭಾರತೀಯ ಜನತಾ ಪಕ್ಷ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಘಟಕದಿಂದ ಆಯೋಜಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ 11 ವರ್ಷ ವಿಕಸಿತ ಭಾರತ ಸಂಕಲ್ಪ ಸಭೆ ಮತ್ತು ತುರ್ತು ಪರಿಸ್ಥಿತಿ ಕರಾಳ ದಿನಗಳ ಹೋರಾಟದ 50ನೇ ವರ್ಷದ ಅನಾಭರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.