ಡಿಸೆಂಬರ್ 3 ರಂದು ಚಿತ್ರದುರ್ಗದ ಮಹರ್ಷಿ ವಾಲ್ಮೀಕಿ ಭವನದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ಅಂಗವಿಕಲ ನೌಕರರ ಸಂಘ ಜಿಲ್ಲಾ ಘಟಕ, ಗ್ರಾಮೀಣ, ನಗರ, ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರ ಜಿಲ್ಲಾ ಒಕ್ಕೂಟ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ “ವಿಶ್ವ ವಿಕಲಚೇತನರ ದಿನಾಚರಣೆ”ಯನ್ನು ಹಮ್ಮಿಕೊಳ್ಳಲಾಗಿದೆ