ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಪ್ರಕಾಶ್ ಡಂಬಳೆ ಅವರು ಭಾನುವಾರ 11 ಗಂಟೆಗೆ ಠಾಣೆ ವ್ಯಾಪ್ತಿಯಲ್ಲಿ ವಿವಿಧ ಪ್ರದೇಶಗಳಲ್ಲಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವಂತೆ ಜಾಗೃತಿ ಮೂಡಿಸಿದರು. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಒಂದು ನಿರ್ಣಯ ಕೈಗೊಂಡಿದ್ದು ಇನ್ನು ಮುಂದೆ ವಾಹನ ಸವಾರರು ಎಲ್ಲರೂ ಕೂಡ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂಬ ಬಗ್ಗೆ ಜಾಗೃತಿಯನ್ನು ಮೂಡಿಸಿದರು. ಹೆಲ್ಮೆಟ್ ಧರಿಸಿ ಧರಿಸುವುದರಿಂದ ದ್ವಿಚಕ್ರ ವಾಹನ ಸಭಾರಿಗೆ ಆಗುವ ಲಾಭಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಎಲ್ಲರೂ ಹೆಲ್ಮೆಟ್ ಕಡ್ಡಾಯವಾಗಿ ಧರಿಸುವಂತೆ ಸೂಚನೆ ನೀಡಿದರು.