ಸಾಗರ: ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸಾಗರದಲ್ಲಿ ಪ್ರತಿಭಟನೆ
Sagar, Shimoga | Oct 8, 2025 ಶಿವಮೊಗ್ಗ ಜಿಲ್ಲೆಯ ಭೂರಹಿತ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಹಾಗೂ ಅರಣ್ಯ ಇಲಾಖೆ ರೈತರಿಗೆ ನೋಟಿಸ್ ನೀಡುತ್ತಿರುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ಬುಧವಾರ ಮಲೆನಾಡು ರೈತ ಹೋರಾಟ ಸಮಿತಿ ವತಿಯಿಂದ ಸಾಗರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಅರಣ್ಯ ಇಲಾಖೆಯದ್ದು ಸಂಪೂರ್ಣ ರೈತವಿರೋಧಿ ನಡೆಯಗಿದೆ. ಮುಳುಗಡೆ ಸಂತ್ರಸ್ತರಿಗೆ ಅರಣ್ಯ ಇಲಾಖೆ ಅನ್ಯಾಯ ಮಾಡುತ್ತಿದೆ. ಅರಣ್ಯ ಇಲಾಖೆ ಮುಳುಗಡೆ ಸಂತ್ರಸ್ತರು ಯಾರೂ ಇಲ್ಲ ಎಂದು ವರದಿ ನೀಡಿದೆ. ಮೂರು ಎಕರೆಯೊಳಗೆ ಜಮೀನು ಹೊಂದಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಭರವಸೆ ನೀಡಿದ್ದರು ತೆರವಿಗೆ ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.