ಬೆಂಗಳೂರು ಉತ್ತರ: ನಗರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನ ಉದ್ಘಾಟಿಸಿದ ಶಾಸಕ ಗೋಪಾಲಯ್ಯ
ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಶ್ರೀ ಹುತ್ತದ ವೆಂಕಟರಮಣಸ್ವಾಮಿ ದೇವಸ್ಥಾನದ ಆವರಣದಲ್ಲಿ ಭಾನುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹಿರಿಯ ನಾಗರಿಕರಿಗಾಗಿ ಆಯೋಜಿಸಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಶಾಸಕ ಗೋಪಾಲಯ್ಯ ಅವರು ಉದ್ಘಾಟಿಸಿ ಮಾತನಾಡಿ, ಆರೋಗ್ಯ ಶಿಬಿರದಲ್ಲಿ ಬಿ.ಪಿ, ಶುಗರ್, ಬ್ಲಡ್ ಟೆಸ್ಟ್, ಇಸಿಜಿ, ಎಕೊ, ಟೆಸ್ಟ್‌ಗಳನ್ನು ಮಾಡಲಾಗುತ್ತದೆ. ಕಣ್ಣಿನ ಪೊರೆಯಿರುವವರಿಗೆ ಉಚಿತ ಶಸ್ತ್ರಚಿಕಿತ್ಸೆ, ದೃಷ್ಟಿ ದೋಷ ಇರುವವರಿಗೆ ಕಣ್ಣಿನ ಪರೀಕ್ಷೆ ಮತ್ತು ಕನ್ನಡಕ ವಿತರಣೆ ಮೊದಲಾದ ಸೌಲಭ್ಯಗಳನ್ನು ಶಿಬಿರದಲ್ಲಿ ಎಲ್ಲ ವ್ಯವಸ್ಥೆಯನ್ನು ಮಾಡಲಾಗಿದೆ, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಇದರಿಂದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.