ಡಿ.16,ಮಂಗಳವಾರ ಮಧ್ಯಾಹ್ನ 12ಕ್ಕೆ ಕಂಪ್ಲಿಯ ಅಂಬೇಡ್ಕರ್ ಸರ್ಕಲ್‌ನಲ್ಲಿ ಇಂದು ದಲಿತ ಮುಖಂಡರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಯುತ್ತಿರುವ ಮುಖ್ಯಮಂತ್ರಿ ಬದಲಾವಣೆ ಚಟುವಟಿಕೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಡಾ. ಜಿ. ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಬೇಕೆಂದು ಒತ್ತಾಯಿಸಿದರು. ಡಾ. ಜಿ. ಪರಮೇಶ್ವರ್ ಅವರು ಸರಳತೆ, ಸೌಜನ್ಯ ಹಾಗೂ ಆಡಳಿತಾನುಭವ ಹೊಂದಿರುವ ನಾಯಕರು ಎಂದು ಶ್ಲಾಘಿಸಿದ ದಲಿತ ಮುಖಂಡರು, ಎರಡು ಬಾರಿ ಕೆಪಿಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, 2013ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿರುವುದು ಅವರ ಸಾಮರ್ಥ್ಯದ ಸಾಕ್ಷಿಯಾಗಿದೆ ಎಂದರು. ದಲಿತ ಸಮುದಾಯಕ್ಕೆ ಮುಖ್ಯ