ಚಿಕ್ಕಬಳ್ಳಾಪುರ: ಗೃಹಲಕ್ಷ್ಮೀ ಯೋಜನೆಗೆ ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಬಳ್ಳಾಪುರ ಪ್ರಕಟಣೆ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಯೋಜನೆಯ ಪ್ರಯೋಜನ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾಡಳಿತ ಭವನದಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಇಂದು ಶನಿವಾರ ಸಂಜೆ 4 ಗಂಟೆಯಲ್ಲಿ ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮೀ ಯೋಜನೆಯ ಪ್ರಯೋಜನೆ ಪಡೆಯಲು ಅನುಕೂಲವಾಗುವಂತೆ ಗೃಹಲಕ್ಷ್ಮೀ ತಂತ್ರಾಂಶದಲ್ಲಿ ಅಳವಡಿಸಿರುವಂತೆ ತಾವು ಪಡೆದಿರುವ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.