ಶಿವಮೊಗ್ಗ: ಭ್ರಷ್ಟಾಚಾರ ಮುಚ್ಚಿ ಹಾಕಲು ಬಿಜೆಪಿಯಿಂದ ಸೋಗಲಾಡಿತನ: ನಗರದಲ್ಲಿ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ
ಭ್ರಷ್ಟಾಚಾರದ ಕಾರಣಕ್ಕಾಗಿ ಅಧಿಕಾರ ಕಳೆದುಕೊಂಡ ಬಿಜೆಪಿ ನಾಯಕರು ತಮ್ಮ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳನ್ನು ಮುಚ್ಚಿಹಾಕಲು ಹಾಗು ಜನರ ಮನಸ್ಸನ್ನು ಬೇರೆಡೆಗೆ ತೆಲೆಯನ್ನು ಈಗಿನ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿರುವುದು ಸೋಬಲಾಡಿತನ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಶನಿವಾರ ಶಿವಮೊಗ್ಗ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೂಢ ಹಗರಣಕ್ಕೆ ಸಂಬಂಧಿಸಿದಂತೆ ಹಗರಣ ಮಾಡಿದವರು ಬಿಜೆಪಿಯವರು. ಅವರ ಕಾಲದಲ್ಲಿಯೇ ಮಂಜೂರಾತಿ ನೀಡಿದ್ದರು.ಈಗ ಅವರ ವಿರುದ್ಧವೇ ಹೋರಾಟ ಮಾಡುತ್ತಿದ್ದಾರೆ ಎಂದು ವ್ಯಂಗ್ಯ ಮಾಡಿದರು.