ತೀರ್ಥಹಳ್ಳಿ: ಸೊಪ್ಪುಗುಡ್ಡೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ಆರಗ ಜ್ಞಾನೇಂದ್ರ
ತೀರ್ಥಹಳ್ಳಿಯ ಶಾಸಕ ಆರಗ ಜ್ಞಾನೇಂದ್ರ ಅವರು ಭಾನುವಾರ ತಮ್ಮ ಕ್ಷೇತ್ರದ ಸಾರ್ವಜನಿಕರ ಅಹವಾಲನ್ನ ಸ್ವೀಕರಿಸಿದರು ಸೊಪ್ಪುಗುಡ್ಡೆಯ ತಮ್ಮ ಗೃಹ ಕಚೇರಿಯಲ್ಲಿ ತೀರ್ಥಹಳ್ಳಿ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿ ದಂತಹ ಸಾರ್ವಜನಿಕರು ಗ್ರಾಮದ ಅಭಿವೃದ್ಧಿ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಶಾಸಕರಿಗೆ ಮನವಿ ಮಾಡಿದರು. ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸುವಂತೆ ಶಾಸಕರು ತಾಕೀತು ಮಾಡಿದ್ದಾರೆ.