ಮಡಿಕೇರಿ: ಮಡಿಕೇರಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ: ಯುವಜನತೆಗೆ ಆದರ್ಶ ಎಂದ ಅತಿಥಿಗಳು
ಮಡಿಕೇರಿಯ ಗಾಂಧಿ ಭವನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸಲಾಯಿತು. ಈ ವೇಳೆ ಮಾತನಾಡಿದ ರೇವತಿ ರಮೇಶ್, ಚೆನ್ನಮ್ಮನವರ ಶೌರ್ಯ ಮತ್ತು ದೇಶಪ್ರೇಮದ ಮೌಲ್ಯಗಳನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ತಹಶೀಲ್ದಾರ್ ಗುರುರಾಜ್ ಕಾರ್ಯಕ್ರಮ ಉದ್ಘಾಟಿಸಿದರು.