ಹೊನ್ನಾವರ: ಡಿ.27ರಂದು ಮೂಡಗಣಪತಿ ಸಭಾಭವನದಲ್ಲಿ ಶರಾವತಿ ಉತ್ಸವ : ಪಟ್ಟಣದಲ್ಲಿ ಶರಾವತಿ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ವೆಂಕಟ್ರಮಣ ಹೆಗಡೆ ಮಾಹಿತಿ
ಹೊನ್ನಾವರ : ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ಶರಾವತಿ ಸಾಂಸ್ಕೃತಿಕ ವೇದಿಕೆಯ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ 19ನೇ ವರ್ಷದ ಶರಾವತಿ ಉತ್ಸವವನ್ನು ಡಿ. 27 ರಂದು ಆಯೋಜಿಸಲಾಗಿದೆ ಎಂದು ಶರಾವತಿ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ವೆಂಕಟ್ರಮಣ ಹೆಗಡೆ ಕವಲಕ್ಕಿ ಹೇಳಿದರು. ಅವರು ಗುರುವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಹೊನ್ನಾವರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಉತ್ಸವದ ಕುರಿತಂತೆ ಮಾಹಿತಿಯನ್ನು ನೀಡಿದರು.