ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ನಗರದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣ, ಬಸ್ ನಿಲ್ದಾಣ ಹಾಗೂ ರೈಲ್ವೇ ನಿಲ್ದಾಣದಲ್ಲಿ ವಾಸವಿರುವ ಬೀದಿ ನಾಯಿಗಳನ್ನು ಪರಿಶೀಲಿಸಿ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಮಾಹಿತಿ ನೀಡುವಂತೆ ಹಾಗೂ ಜವಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿ ನೇಮಿಸುವಂತೆ ಸಂಬಂದಪಟ್ಟ ಮುಖ್ಯಸ್ಥರಿಗೆ ಚಿತ್ರದುರ್ಗ ನಗರ ಸಭೆ ಪೌರಾಯುಕ್ತರು ತಿಳಿಸಿದ್ದಾರೆ.