ದೊಡ್ಡಬಳ್ಳಾಪುರ: ಸಾಮಾಜಿಕ ಶೈಕ್ಷಣಿಕ ಸಮಿಕ್ಷೆಯಲ್ಲಿ ಮಾದಿಗ ಎಂದೆ ಬರಸಿ ಎಂದು ಮಾಜಿ ಸಚಿವ ಆಂಜನೇಯ ಸಮುದಾಯವರಿಗೆ ನಗರದಲ್ಲಿ ಸೂಚಿಸಿದರು
ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ನಮ್ಮ ಸಮುದಾಯದ ಬಂಧುಗಳು A.K., A.D., A.A ಎಂದು ಬರಸದೆ, ಧರ್ಮದ ಕಾಲಂನಲ್ಲಿ ಹಿಂದು, ಜಾತಿ ಮತ್ತು ಉಪಜಾತಿ ಕಾಲಂನಲ್ಲಿ B-061 ಮಾದಿಗ ಎಂದೇ ಬರಸಬೇಕು ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು. ದೊಡ್ಡಬಳ್ಳಾಪುರ ನಗರದ ಹಳೇ ಬಸ್ ನಿಲ್ದಾಣ ಸಮೀಪವಿರುವ ಡಾ|| ರಾಜ್ಕುಮಾರ್ ಕಲಾಮಂದಿರ (ಟೌನ್ಹಾಲ್)ದಲ್ಲಿ ಕರ್ನಾಟಕ ಮಾದರ ಮಹಾಸಭಾ ವತಿಯಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಬಗ್ಗೆ ಜಾಗೃತಿ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.