ಹೊಸನಗರ: ಕಲಗೋಡು ರತ್ನಾಕರ್ ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ: ಬೆಂಗಳೂರಿನಲ್ಲಿ ಕಾರ್ಯಕರ್ತರಿಂದ ಶಾಸಕರ ಬಳಿ ಹಕ್ಕೊತ್ತಾಯ
ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲಗೋಡು ರತ್ನಾಕರ್ ರವರಿಗೆ ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಬೆಂಗಳೂರಿನಲ್ಲಿ ಭಾನುವಾರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರಿಗೆ ನಿಯೋಗದ ಮೂಲಕ ಮನವಿ ಸಲ್ಲಿಸಿದ್ದಾರೆ.