ಯಲ್ಲಾಪುರ: ಕಾಳಮ್ಮ ನಗರದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಸ್ಕೂಟಿ ಎಗರಿಸಿದ್ದ ಆರೋಪಿಯನ್ನು ಬಂಧಿಸಿ ಬಂಧಿಸಿ, ಕದ್ದ ವಾಹನವನ್ನು ವಶಪಡಿಸಿಕೊಳ್ಳುವಲ್ಲಿ ಯಲ್ಲಾಪುರ ಪೊಲೀಸರು ಯಶಸ್ವಿಯಾಗಿದ್ದರೆ. ತಾಲೂಕಿನ ಹಳಿಯಾಳ ಕ್ರಾಸ್ ನಿವಾಸಿ ಪ್ರಕಾಶ ಇನಾಸ್ ಸಿದ್ದಿ (26) ಬಂಧಿತ ಆರೋಪಿ. ಯಲ್ಲಾಪುರ ಪಟ್ಟಣದ ಕಾಳಮ್ಮನಗರದ ನಿವಾಸಿ ರಾಘವೇಂದ್ರ ಮಹಾಬಲೇಶ್ವರ ಭಟ್ಟ ಎಂಬುವವರು ತಮ್ಮ ಮನೆಯ ಎದುರು (ಎಮ್.ಹೆಚ್ ನಾಯ್ಕ ಕಂಪೌಂಡ ಹತ್ತಿರ) ನಿಲ್ಲಿಸಿದ್ದ ಕಪ್ಪು ಬಣ್ಣದ ಟಿವಿಎಸ್ ಜುಪಿಟರ್ ಸ್ಕೂಟಿಯನ್ನು ಕಳೆದ ಅಕ್ಟೋಬರ್ 15, 2025 ರಂದು ಕಳ್ಳತನ ಮಾಡಲಾಗಿತ್ತು. ಈ ಕುರಿತು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿತ್ತು