ಮಂಗಳೂರು: ಅಡ್ಯಾರ್ ತಜಿಪೋಡಿ ಎಂಬಲ್ಲಿ ಗೋ ಕಳ್ಳತನ ಮಾಡಿದ ಆರೋಪಿಗಳ ಬಂಧನ
ಮಂಗಳೂರು ನಗರದ ತಜಿಪೋಡಿ ಮನೆ, ಅಡ್ಯಾರ್ ಎಂಬಲ್ಲಿ ಉಮೇಶ್ ಆಳ್ವ ಎಂಬವರ ಮನೆಯ ಅಂಗಳದಿಂದ ಒಂದು ಕ್ರಾಸ್ ಜರ್ಸಿ ಹಸುವನ್ನು ಕಳ್ಳತನ ಮಾಡಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ: 144/2025 ಕಲಂ: 303 (2) ಐಪಿಸಿ ರಂತೆ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಪ್ರಕರಣದಲ್ಲಿ ಕಳುವಾದ ಹಸುವನ್ನು ಕಂಕನಾಡಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಜೀವಂತವಾಗಿ ಪತ್ತೆ ಆರೋಪಿಗಳನ್ನು ದಸ್ತಗಿರಿ ಮಾಡಿರುತ್ತಾರೆ.