ಹಳಿಯಾಳ: ಪಟ್ಟಣಕ್ಕೆ ಭೇಟಿ ನೀಡಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಕೆಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಸತತ 7ನೇ ಬಾರಿ ಗೆದ್ದ ಘೋಟ್ನೇಕರಿಗೆ ಸನ್ಮಾನ
ಹಳಿಯಾಳ : ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಇಂದು ಗುರುವಾರ ಬೆಳಿಗ್ಗೆ 11:30 ಗಂಟೆ ಸುಮಾರಿಗೆ ಹಳಿಯಾಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಪ್ರತಿಷ್ಠಿತ ಕೆಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ 7ನೇ ಬಾರಿ ಗೆದ್ದ ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಬಿಜೆಪಿಯ ನಾಯಕರಾದ ಎಸ್.ಎಲ್.ಘೋಟ್ನೇಕರ ಅವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಸನ್ಮಾನಿಸಿ ಗೌರವಿಸಿದರು.