ಚಿತ್ರದುರ್ಗದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ನೇತೃತ್ವದಲ್ಲಿ ಜಿಲ್ಲಾ ಸಲಹಾ ಸಮಿತಿ ಹಾಗೂ ಜಿಲ್ಲಾ ಹಂತದ ಪುನರ್ ಪರಿಶೀಲನಾ ಸಮಿತಿ ಸಭೆ ಹಮ್ಮಿಕೊಳ್ಳಲಾಗಿತ್ತು. ಗುರುವಾರ ಮಧ್ಯಾಹ್ನ 12 ಗಂಟೆಗೆ ಸಭೆ ಹಮ್ಮಿಕೊಂಡಿದ್ದು ಜಿ.ಪಂ. ಸಿಇಓ ಡಾ.ಆಕಾಶ್ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದು ಪಡೆದ ಸಾಲ ಹಿಂದಿರುಗಿಸುವಲ್ಲಿ ಜಿಲ್ಲೆಯ ಸ್ವ ಸಹಾಯ ಗುಂಪುಗಳು ಮಾದರಿಯಾಗಿವೆ. ಆದರೆ ಇಲ್ಲಸಲ್ಲದ ಕಾರಣ ಹೇಳಿ ಸ್ವ ಸಹಾಯ ಗುಂಪುಗಳಿಗೆ ಸಾಲ ನಿರಾಕರಣೆ ಮಾಡುವ ಬ್ಯಾಂಕುಗಳ ವ್ಯವಸ್ಥಾಪಕರಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಎಂ.ರಾಘವೇಂದ್ರ ಅವರಿಗೆ ಸೂಚನೆ ನೀಡಿದರು