ಗುಬ್ಬಿ ಪಟ್ಟಣದಲ್ಲಿ ತಹಶೀಲ್ದಾರ್, ತಾಪಂ ಇಒ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನೇತೃತ್ವದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತುಮಕೂರು, ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿಯಿಂದ ಶನಿವಾರ ಮನೆಮನೆಗೆ ತೆರಳಿ ಮತದಾನದ ಜಾಗೃತಿ ಮೂಡಿಸಲಾಯಿತು. ಪಟ್ಟಣದಲ್ಲಿ ಕಡಿಮೆ ಮತದಾನ ಆಗುವ ಪ್ರದೇಶಗಳಲ್ಲಿ ಪ್ರತಿ ಮನೆ ಮನೆಗೂ ಭೇಟಿ ನೀಡಿ ಮತದಾನ ಮಾಡುವಂತೆ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗ, ಸರ್ಕಲ್ ಇನ್ಸ್ಪೆಕ್ಟರ್ , ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ವರ್ಗ, ಬಿಎಲ್ಒ ಪ್ರತಿ ಮನೆಗೂ ಭೇಟಿ ನೀಡಿ ಮತದಾನ ಜಾಗೃತಿ ಮೂಡಿಸಿದರು.