ಚನ್ನರಾಯಪಟ್ಟಣ: ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ ಹಿನ್ನೆಲೆ, ಹುಟ್ಟೂರು ಸಂತೆ ಶಿವರ ಗ್ರಾಮದಲ್ಲಿ ಅಂತಿಮ ದರ್ಶನದ ಭದ್ರತಾ ವ್ಯವಸ್ಥೆ ಪರಿಶೀಲನೆ
ಕರುನಾಡಿನ ಜೀವಂತ ಸಾಹಿತ್ಯ ದಂತಕಥೆ ಎಸ್.ಎಲ್. ಭೈರಪ್ಪ ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಎಸ್.ಎಲ್. ಭೈರಪ್ಪ (94) ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿರುವ ಭೈರಪ್ಪನವರು ತಮ್ಮದೇ ಆದ ದೊಡ್ಡ ಓದುಗ ಬಳಗವನ್ನ ಸೃಷ್ಟಿಸಿಕೊಂಡಿದ್ದರು. 2023ರಲ್ಲಿ ಪದ್ಮಭೂಷಣ ಪ್ರಶಸ್ತಿ ಸೇರಿ ಸರಸ್ವತಿ ಸಮ್ಮಾನ್, ನಾಡೋಜ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. 2007ರಲ್ಲಿ ಕಲಬುರಗಿ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಕೂಡ ಇವರಿಗೆ ಸಂದಿದೆ. ಭೈರಪ್ಪನವರು ರಚಿಸಿದ ಕಾದಂಬರಿಗಳಲ್ಲಿಯೇ 'ಪರ್ವ' ಅತ್ಯಂತ ಜನಪ್ರಿಯವಾದುದು,ಎಸ್.ಎಲ್.ಭೈರಪ್ಪ ಅಂತಿಮ ದರ್ಶನದ ಭದ್ರತಾ ವ್ಯವಸ್ಥೆಗಾಗಿ ಎಎಸ್ಪಿ ತಮ್ಮಯ್ಯ ಅವ