ಚಿಟಗುಪ್ಪ: ಪಟ್ಟಣದಲ್ಲಿ ತಾಲೂಕ ಆಡಳಿತ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ
ಪಟ್ಟಣದಲ್ಲಿ ತಾಲೂಕ ಆಡಳಿತ ವತಿಯಿಂದ ಕನ್ನಡ ರಾಜ್ಯೋತ್ಸವದ 70ನೇ ವರ್ಷಾಚರಣೆಯನ್ನು ಶನಿವಾರ ಬೆಳಗ್ಗೆ 11:30 ಕ್ಕೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ತಹಶೀಲ್ದಾರ್ ಮಂಜುನಾಥ್ ಪಂಚಾಳ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದ್ದರು. ಪುರಸಭೆ ಅಧ್ಯಕ್ಷ ದಿಲೀಪಕುಮಾರ್ ಬಗ್ದಲ್ಕರ್, ಉಪಾಧ್ಯಕ್ಷ ನಾಸಿರ್ ಖಾನ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಗಣ್ಯರು ಹಾಜರಿದ್ದರು.