ರಾಯಚೂರು: ಶ್ರೀ ಭಕ್ತ ಕನಕದಾಸ ಜಯಂತಿ ಆಚರಣೆಗೆ ಸೂಚನೆ
ರಾಯಚೂರು ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಮಟ್ಟದಲ್ಲಿ ನವೆಂಬರ್ 8 ರಂದು ನಡೆಯಲಿರುವ ಶ್ರೀ ಭಕ್ತ ಕನಕದಾಸರ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಭಜಂತ್ರಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಯಂತಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ನಗರದ ರಂಗಮಂದಿರದವರೆಗೆ ಕನಕದಾಸರ ಭಾವಚಿತ್ರ ರಥಯಾತ್ರೆ ಮೆರವಣಿಗೆ ಹೊರಡಲಿದ್ದು, ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದರು.