ಬಳ್ಳಾರಿ: ನಗರದ ಆಂದ್ರಾಳ್ ರಸ್ತೆಯ ಗುಂಡಿಗಳಲ್ಲಿ ನಿಂತ ಮಳೆ ನೀರು ವಾಹನ ಸವಾರರ ಪರದಾಟ
@
ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ನಗರದ ಆಂದ್ರಾಳ್ ರಸ್ತೆಯಲ್ಲಿ ನೀರು ನಿಂತು ಹೊಳೆಯಂತಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಹೊಂಡ ಗುಂಡಿಗಳಿಂದ ಕೂಡಿರುವ ಆಂದ್ರಾಳ್ ಮುಖ್ಯ ರಸ್ತೆಯಲ್ಲಿ ಸ್ವಲ್ಪ ಮಳೆಯಾದೂ ಕೂಡ ನೀರು ನಿಂತು ಹೊಳೆಯಂತಾಗುತ್ತೆ. ಹೀಗಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ. ರಸ್ತೆ ಗುಂಡಿ ಸರಿಪಡಿಸುವಂತೆ ಹಲವು ಬಾರಿ ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮಂಗಳವಾರ ಬೆಳಿಗ್ಗೆ 10ಗಂಟೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.