ಕಾಪು: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ ವಂಚನೆ
Kapu, Udupi | Sep 16, 2025 ಈ ಹಿಂದೆ ವಿದೇಶದಲ್ಲಿದ್ದ ಕಾಪುವಿನ ವಸಂತ್ ಡಿ.ಪೂಜಾರಿ ಪರಿಚಯದ ಕೆಲವರಿಗೆ ವಿದೇಶಕ್ಕೆ ತೆರಳಲು ವಿಸಾ ಮಾಡಿಸಿ ಕೊಡಲು ಸುರತ್ಕಲ್ ನಿವಾಸಿ ಜೋಬಿ ಅರಂಗಸ್ಸೆರಿ ದೆವಸ್ಸಿ ಎಂಬವರನ್ನು ಸಂಪರ್ಕಿಸಿದ್ದು, ಅವರು ಚಂಡಿಗಢದಲ್ಲಿರುವ ಕಂಪನಿಯಲ್ಲಿ ವಿದೇಶಕ್ಕೆ ತೆರಳುವ ವ್ಯಕ್ತಿಗಳಿಗೆ ಕೆಲಸದ ವಿಸಾ ಕೊಡಿಸುತ್ತಾರೆ ಎಂಬುದಾಗಿ ತಿಳಿಸಿದ್ದರು. ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 22 ಮಂದಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ