ಬೆಂಗಳೂರು ಪೂರ್ವ: ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ: ನಗರದಲ್ಲಿ ಡಿ.ಎಸ್.ರಮೇಶ್
ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಇಬ್ಬಲೂರು ಜಂಕ್ಷನ್ ನಿಂದ ಟಿನ್ ಫ್ಯಾಕ್ಟರಿವರೆಗೆ ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಹಾಗೂ ತೀವ್ರ ಸ್ವಚ್ಚತಾ ಅಭಿಯಾನವನ್ನು ಕೈಗೊಳ್ಳಲಾಗಿಯಿತು ಎಂದು ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್.ರಮೇಶ್ ರವರು ತಿಳಿಸಿದರು. ಸೈಡ್ ಡ್ರೈನ್ ಸ್ವಚ್ಚಗೊಳಿಸಿ, ಸ್ಲ್ಯಾಬ್ ಗಳನ್ನು ಸರಿಪಡಿಸಿ, ಆಯುಕ್ತರು ಇಂದು ಮುಂಜಾನೆ ನಗರ ಪಾಲಿಕೆಯ ಇಬ್ಬಲೂರು ಜಂಕ್ಷನ್ ನಿಂದ ಟಿನ್ ಫ್ಯಾಕ್ಟರಿವರೆಗಿನ ರಸ್ತೆ, ಸೈಡ್ ಡ್ರೈನ್, ಪಾದಚಾರಿ ಮಾರ್ಗವನ್ನು ಪರಿಶೀಲಿಸಿದರು. ಚರಂಡಿಗಳನ್ನು ಸ್ಚಚ್ಚತೆ ಮಾಡಿ ಸರಿಯಾಗಿ ನೀರು ಹರಿದು ಹೋಗುವಂತೆ ಮಾಡಿ ಹಾಗೂ ಮುರಿದಿರುವ ಚರಂಡಿ ಸ್ಲ್ಯಾಬ್ ಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು.