ಬೆಂಗಳೂರು ಪೂರ್ವ: ಗಂಡು ಮಗು ಆಗಲಿಲ್ಲ ಎಂದು ಪತ್ನಿಗೆ ಕೈ ಕೊಟ್ಟು ಪರಾರಿಯಾದ ಪತಿ; ನಗರದ ಈಶಾನ್ಯ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಮೂರು ಹೆಣ್ಣು ಮಕ್ಕಳನ್ನು ಹೆತ್ತುಕೊಟ್ಟ ಪತ್ನಿಗೆ ಪತಿ ಕೈಕೊಟ್ಟು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಈ ಸಂಬಂಧ ಈಶಾನ್ಯ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರೀಶ್, ಪತ್ನಿಗೆ ಕೈಕೊಟ್ಟು ಪರಾರಿಯಾದ ವ್ಯಕ್ತಿ. ಹರೀಶ್ ಮೂಲತಃ ರಾಜಸ್ಥಾನದವನಾಗಿದ್ದು, ಬೆಂಗಳೂರಿನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಕೆಲಸ ಮಾಡುತ್ತಿದ್ದಾನೆ. ಈತ ವರಲಕ್ಷ್ಮೀ ಎಂಬ ಸ್ಟಾಫ್ ನರ್ಸ್ನ ಪ್ರೀತಿಸಿ ಮದುವೆ ಆಗಿದ್ದ. ಬಳಿಕ ಕುಟುಂಬಸ್ಥರನ್ನು ಒಪ್ಪಿಸಿ ಮದುವೆಯಾಗಿದ್ದ. ಹೊಸದರಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ, ಈ ಜೋಡಿಗೆ ಹುಟ್ಟಿದ ಮೂವರು ಮಕ್ಕಳು ಕೂಡ ಹೆಣ್ಣು. ಇದರಿಂದ ಹರೀಶ್ ವರಲಕ್ಷ್ಮೀಗೆ ಕೈಕೊಟ್ಟು ನಾಪತ್ತೆಯಾಗಿದ್ದಾನೆ.