ರಾಯಚೂರು: ರಾಯಚೂರ ಜಿಲ್ಲೆಯಲ್ಲಿ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನಕ್ಕೆ ಚಾಲನೆ
ನವ್ಹಂಬರ್ 03 ರಿಂದ 19 ರವರೆಗೆ ರಾಯಚೂರು ಜಿಲ್ಲೆಯಾದ್ಯಂತ ನಡೆಯಲಿರುವ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನಕ್ಕೆ ಸೋಮವಾರ 11 ಗಂಟೆಗೆ ಚಾಲನೆ ನೀಡಲಾಯಿತು. ಅಭಿಯಾನದ ಅಂಗವಾಗಿ ಆಯೋಜನೆ ಮಾಡಿದ್ದ ಜಾಗೃತಿ ಜಾಥಾಕ್ಕೆ ಮಹಾನಗರ ಪಾಲಿಕೆಯ ಸದಸ್ಯರಾದ ಉಮಾ ರವೀಂದ್ರ ಜಾಲ್ದಾರ ಚಾಲನೆ ನೀಡಿದರು. ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿ ಜಹಿರಾಬಾದ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.