ಗೃಹಲಕ್ಷ್ಮೀ ಹಣ ದುರುಪಯೋಗದ ಆರೋಪ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸಿದರು. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆ ಐದು ಸಾವಿರ ಕೋಟಿ ರೂ.ಗಳ ಬಗ್ಗೆ ಜವಾಬ್ದಾರಿ ಸ್ಥಾನದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸದನದಲ್ಲಿ ತಪ್ಪು ಮಾಹಿತಿ ನೀಡಿ ಮಹಿಳೆಯರಿಗೆ ವಂಚನೆ ಮಾಡಿದ್ದಾರೆ. ಶುಕ್ರವಾರ ನಗರದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸಿದರು ಲಕ್ಷ್ಮೀ ಹೆಬ್ಬಾಳ್ಕರ ಮಾಡಿರುವ ಹಗರಣವನ್ನು ಅಧಿಕಾರಿಗಳ ಮೇಲೆ ಹಾಕುವ ಹುನ್ನಾರ ನಡೆಸಿದ್ದಾರೆ. ಕಾಂಗ್ರೆಸ್ ಸರಕಾರ ಬಂದ ಮೇಲೆ ಅಧಿಕಾರಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದರು