ಜೋಯಿಡಾ : ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತಿಗೆ 2023 -24 ನೇ ಸಾಲಿನ ಸರ್ಕಾರದಿಂದ ಸಿಗುವ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಅವರ ಸಮ್ಮುಖದಲ್ಲಿ ಜೋಯಿಡಾ ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತ್ ಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಬಗ್ಗೆ ಇಂದು ಸೋಮವಾರ ಸಂಜೆ 5:30 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.