ನಿಡಗುಂದಿ: ಗೊಳಸಂಗಿ ಗ್ರಾಮದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಶಿವಾನಂದ ಪಾಟೀಲ್
ವಿಜಯಪುರ ನಿಡಗುಂದಿ ತಾಲೂಕಿನ ಗೋಳಸಂಗಿ ಗ್ರಾಮದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸೋಮವಾರ ಸಾಯಂಕಾಲ 5ಗಂಟೆ ಸುಮಾರಿಗೆ ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಶಿಕ್ಷಕರು ವಿದ್ಯಾರ್ಥಿಗಳ ಬಾಳಿಗೆ ಬೆಳಕು ಇದ್ದಂತೆ, ಒಬ್ಬ ಉತ್ತಮ ನಾಗರಿಕರನ್ನು ಸೃಷ್ಟಿ ಮಾಡುವ ಸಾಮರ್ಥ್ಯ ಶಿಕ್ಷಕರಿಗೆ ಇರುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ಶಿಕ್ಷಕರು ಹಾಗೂ ಜನಪ್ರತಿನಿಧಿಗಳು ಭಾಗಿಯಾಗಿದ್ದರು.