ಕಲಬುರಗಿ: ನಗರದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಆಯೋಜನೆ
ಜೂನ್ 6 ರಂದು ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ “ಪ್ಲಾಸ್ಟಿಕ್ ಮಾಲಿನ್ಯವನ್ನು ಸೋಲಿಸುವ” ಘೋಷವಾಕ್ಯದೊಂದಿಗೆ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀನಿವಾಸ ನವಲೆ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರಬಂಧ, ರೀಲ್ಸ್, ಚಿತ್ರಕಲೆ ಸ್ಪರ್ಧೆಗಳು ವಿವಿಧ ತರಗತಿಯ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿತ್ತು. ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳೊಂದಿಗೆ ಸಮಾಧಾನಕರ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು ಎಂದು ಶುಕ್ರವಾರ 9 ಗಂಟೆಗೆ ಮಾಹಿತಿ ಲಭ್ಯವಾಗಿದೆ.