ಹುಬ್ಬಳ್ಳಿ ನಗರ: ನಗರದಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಪುಣ್ಯತಿಥಿ ಆಚರಣೆ
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಹಸಿರು ಕ್ರಾಂತಿಯ ಹರಿಕಾರರು ಮಹಾನ್ ನಾಯಕ ಡಾ.ಬಾಬು ಜಗಜೀವನ್ ರಾಮ್ ಅವರ ಪುಣ್ಯತಿಥಿಯಂದು ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಲ್ಲಿರುವ ಪುತ್ಥಳಿಗೆ ಹುಧಾ ಪಾಲಿಕೆ ಮೇಯರ್ ಜ್ಯೋತಿ ಪಾಟೀಲ್ ಅವರು ಮಾಲಾರ್ಪಣೆ ಮಾಡಿ ಗೌರವಿಸಿದರು. ಈ ವೇಳೆ ಉಪಮೇಯರ್ ಸಂತೋಷ್ ಚವ್ಹಾನ್, ಪಾಲಿಕೆ ಸದಸ್ಯರಾದ ರಾಜಣ್ಣಾ ಕೊರವಿ, ಶಿವು ಮೆಣಸಿನಕಾಯಿ, ಮುಖಂಡರಾದ ಗುರುನಾಥ ಉಳ್ಳಿಕಾಶಿ, ಶೇಖರಯ್ಯಾ ಮಠಪತಿ ಉಪಸ್ಥಿತರಿದ್ದರು.